ಅಭಿಪ್ರಾಯ / ಸಲಹೆಗಳು

ಕಿರು ಜಲ ವಿದ್ಯುತ್

ಕಿರು ಜಲ ವಿದ್ಯುತ್ ಯೋಜನೆಯು ಸಣ್ಣ ಸಮುದಾಯ ಅಥವಾ ಕೈಗಾರಿಕಾ ಘಟಕಗಳಿಗೆ ಸಣ್ಣ ಪ್ರಮಾಣದಲ್ಲಿ ಸೇವೆ ಮಾಡುವ ಜಲ ವಿದ್ಯುತ್ ಅಭಿವೃದ್ದಿ ಯೋಜನೆಯ ಒಂದು ಭಾಗವಾಗಿರುತ್ತದೆ. ಕಿರು ಜಲ ವಿದ್ಯುತ್ ಯೋಜನೆಯ ವ್ಯಾಖ್ಯಾನವು ಬದಲಾಗುತ್ತದೆ, ಆದರೆ, 25 ಮೆಗಾ ವ್ಯಾಟ್ ನಷ್ಟು ಸಾಮರ್ಥ್ಯವುಳ್ಳ ಯೋಜನೆಯನ್ನು ಕಿರು ಜಲ ವಿದ್ಯುತ್ ಯೋಜನೆಯೆಂದು ಪರಿಗಣಿಸಲಾಗಿದೆ.

ವಿದ್ಯುತ್ ಯೋಜನೆ ಅನುಷ್ಠಾನ ಮತ್ತು ನಿರ್ವಹಣೆಯನ್ನು ವೃತ್ತಿಪರವಾಗಿ ನಿರ್ವಹಿಸುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ರಾಜ್ಯದ ಒಟ್ಟು ವಿದ್ಯುತ್ ಸ್ಥಾಪಿತ ಸಾಮರ್ಥ್ಯವು 4,118.04 ಮೆ.ವ್ಯಾಟ್ ಗಳಾಗಿದ್ದು ಅದರಲ್ಲಿ ಜಲ ವಿದ್ಯುತ್ ಸ್ಥಾವರಗಳು 2,918.655 ಮೆ.ವ್ಯಾಗಳಷ್ಟಿದೆ. ಸ್ಥಾಪಿಸಬಹುದಾದ ಒಟ್ಟು ಸಂಭವನೀಯ ಜಲ ವಿದ್ಯುತ್ ಸಾಮರ್ಥ್ಯವು 7000 ಮೆ.ವ್ಯಾಟ್ ಗಳಷ್ಟಿದ್ದು ಅದರಲ್ಲಿ ಈವರೆಗೆ 40% ಸಾಮರ್ಥ್ಯವನ್ನು ಮಾತ್ರ ಸಾಧಿಸಲಾಗಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಯಮಿತವು ರಾಜ್ಯದಲ್ಲಿ ಅಸಂಪ್ರಧಾಯಿಕ ಇಂಧನ ಮೂಲಗಳ ಪ್ರಚಾರಕ್ಕೆ ಸಂಪೂರ್ಣ ಮೀಸಲಾಗಿಟ್ಟ ಒಂದು ಸಂಸ್ಥೆ. ಕರ್ನಾಟಕದಲ್ಲಿ ಕಿರುಜಲ ವಿದ್ಯುತ್ ಯೋಜನೆಗಳನ್ನು ಉತ್ತೇಜನಗೊಳಿಸಿ ಇಂಧನವನ್ನು ಉತ್ಪಾದಿಸುವುದು ಈ ಸಂಸ್ಥೆಯ ಗುರಿಯಾಗಿರುತ್ತದೆ. ಕರ್ನಾಟಕ ಸರ್ಕಾರದ ಒಂದು ವ್ಯವಸ್ಥಿತ ಮತ್ತು ಯೋಜನೆಗಳ ಸಮತೋಲಿತ ಬೆಳವಣಿಗೆಯಿಂದ ನವೀಕರಿಸಬಹುದಾದ ಇಂಧನ ಶಕ್ತಿಯನ್ನು ಗಳಿಕೊಳ್ಳಲು ಸರ್ಕಾರದ ನೀತಿ ರೂಪಿಸುವಲ್ಲಿ ಕರ್ನಾಟಕ ಸರ್ಕಾರಕ್ಕೆ ಸಲಹೆ, ಸೂಚನೆಗಳನ್ನು ನೀಡುವುದು ಸಂಸ್ಥೆಯ ಉದ್ದೇಶವಾಗಿರುತ್ತದೆ.

ಕಿರು ಜಲ ವಿದ್ಯುತ್ ಸ್ಥಾವರ ಹೇಗೆ ಕಾರ್ಯ ನಿರ್ವಹಿಸುತ್ತವೆ:
ಜಲ ವಿದ್ಯುತ್ ಸ್ಥಾವರದಲ್ಲಿ ಎತ್ತರ ಪ್ರದೇಶದಲ್ಲಿರುವ ನೀರಿನ ಪ್ರಮಾಣ ಮತ್ತು ಅಂತಃ ಶಕ್ತಿಯನ್ನು ವಿದ್ಯುತ್ ಶಕ್ತಿಯಾಗಿ ಮಾರ್ಪಡಿಸಲಾಗುತ್ತದೆ. ವಿದ್ಯುತ್ ಸ್ಥಾವರದ ಒಟ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯವು ನೀರಿನ ಎತ್ತರ ಮತ್ತು ಟರ್ ಬೈನ್ ನ ಮೂಲಕ ಹರಿಯುವ ನೀರಿನ ಪ್ರಮಾಣವನ್ನು ಅವಲಂಬಿಸಿರುತ್ತದೆ.

ಇತ್ತೀಚಿನ ನವೀಕರಣ​ : 14-09-2020 01:00 PM ಅನುಮೋದಕರು: Creator kredl


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080